ಮಂಗಳೂರು:- ದೇಶ ವಿರೋಧಿ ಷಡ್ಯಂತ್ರಕ್ಕೆ ಹಿಂದೂ ಸಮಾಜ ಬಲಿಯಾಗ್ತಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮ ಗಂಗೆಯ ಸ್ವರೂಪ, ಹಿಂದೂ ಧರ್ಮದ ಮೇಲೆ ಯಾಕಿಷ್ಟು ಕೋಪ. ಹೋಳಿ, ದೀಪಾವಳಿ ಯಾವುದೇ ಹಿಂದೂ ಹಬ್ಬ ಇರಲಿ ಹಿಂದೂ ಧರ್ಮದ ಮೇಲೆ ನಿರಂತರ ಸಾಂಸ್ಕೃತಿಕ ಆಘಾತ ನಡೆಯುತ್ತಿದೆ. ಹಿಂದೂಗಳ ಆಚರಣೆಗಳನ್ನು ಮಾಧ್ಯಮಗಳ ಮೂಲಕ ಅಪಹಾಸ್ಯ ಮಾಡಲಾಗುತ್ತಿದೆ. ಹಿಂದೂಗಳ ಶ್ರದ್ಧಾ ಕೇಂದ್ರಗಳಾದ ದೇವಸ್ಥಾನಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಸಂತರ ಮೇಲೆ ಆರೋಪಗಳನ್ನು ಹಾಕಲಾಗುತ್ತದೆ, ಆಕ್ರಮಣ ಮಾಡಲಾಗುತ್ತದೆ. ಎಡಪಂಥೀಯರು ಹಿಂದೂಗಳನ್ನು ಜಾತಿ, ಮತ, ಪಂಥಗಳ ಹೆಸರಿನಲ್ಲಿ ವಿಭಜಿಸುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಅಮೆರಿಕ ಪ್ರಾಯೋಜಿತ ಮತಾಂತರ ಹಾಗೂ ದೇಶ ವಿರೋಧಿ ಷಡ್ಯಂತ್ರಕ್ಕೆ ಹಿಂದೂ ಸಮಾಜ ವ್ಯಾಪಕವಾಗಿ ಬಲಿಯಾಗುತ್ತಿದೆ. ಇದೆಲ್ಲದಕ್ಕೂ ಪರಿಹಾರವೆಂದರೆ ನಮ್ಮ ಧರ್ಮ ರಕ್ಷಣೆ ನಮ್ಮದೇ ಕರ್ತವ್ಯವಾಗಿದೆ ಎಂಬ ಅರಿವು ಮೂಡಿಸುವುದು. ಧರ್ಮ ರಕ್ಷಣೆಗಾಗಿ ಸರ್ವಸ್ವದ ತ್ಯಾಗ ಮಾಡಲು ನಾವು ಸಿದ್ಧರಾಗಿರಬೇಕು. ಹಿಂದೂ ಸಮಾಜ ಜಾಗೃತವಾದರೆ ಇತರರು ಏನೂ ಮಾಡಲು ಸಾಧ್ಯವಿಲ್ಲ ಎಂದು ಕರೆ ನೀಡಿದ್ದಾರೆ.



