HomeKarnataka Newsಬಸ್ ಪ್ರಯಾಣಿಕರಿಗೆ ದರ ಏರಿಕೆಯ ಸುಳಿವು: ಟಿಕೆಟ್ ದರ ಪರಿಷ್ಕರಣೆ ಬಗ್ಗೆ ಸಚಿವ ಬೈರತಿ ಸುರೇಶ್...

ಬಸ್ ಪ್ರಯಾಣಿಕರಿಗೆ ದರ ಏರಿಕೆಯ ಸುಳಿವು: ಟಿಕೆಟ್ ದರ ಪರಿಷ್ಕರಣೆ ಬಗ್ಗೆ ಸಚಿವ ಬೈರತಿ ಸುರೇಶ್ ಮಹತ್ವದ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಬಸ್ ಟಿಕೆಟ್ ದರ ಪರಿಷ್ಕರಣೆ ಕುರಿತು ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಬಸ್ ಪ್ರಯಾಣ ದರ ಪರಿಷ್ಕರಣೆ ಕುರಿತು ಅಧ್ಯಯನ ನಡೆಸುತ್ತಿರುವ ನಿವೃತ್ತ ಐಎಎಸ್ ಅಧಿಕಾರಿ ಅತುಲ್ ಕುಮಾರ್ ತಿವಾರಿ ನೇತೃತ್ವದ ಸಮಿತಿ ಗುರುವಾರ ಅಥವಾ ಶುಕ್ರವಾರ ಸರ್ಕಾರಕ್ಕೆ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡೀಸೆಲ್ ಸೇರಿದಂತೆ ಇಂಧನ ವೆಚ್ಚ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಪರಿಷ್ಕರಣೆಯ ಅಗತ್ಯ ಎದುರಾಗಿದೆ ಎಂದು ಹೇಳಿದ್ದಾರೆ. ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳು ಆರ್ಥಿಕ ಒತ್ತಡ ಎದುರಿಸುತ್ತಿವೆ ಎಂದು ಸಚಿವರು ಇತ್ತೀಚೆಗೆ ವಿಧಾನ ಪರಿಷತ್‌ನಲ್ಲಿಯೂ ತಿಳಿಸಿದ್ದರು.

ವರದಿ ಬಂದ ಬಳಿಕ ಸಿಎಂ ಜೊತೆ ಚರ್ಚೆ

“ಬಸ್ ಟಿಕೆಟ್ ದರ ಪರಿಷ್ಕರಣೆ ಕುರಿತು ವರದಿ ಸಿದ್ಧಪಡಿಸುವಂತೆ ಸಮಿತಿಗೆ ಸೂಚಿಸಲಾಗಿತ್ತು. ಗುರುವಾರ ಅಥವಾ ಶುಕ್ರವಾರ ವರದಿ ಸಲ್ಲಿಕೆಯಾಗುವ ನಿರೀಕ್ಷೆಯಿದೆ. ಮೊದಲು ವರದಿಯನ್ನು ಪರಿಶೀಲಿಸುತ್ತೇನೆ. ನಂತರ ಮುಖ್ಯಮಂತ್ರಿ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ” ಎಂದು ಬೈರತಿ ಸುರೇಶ್ ತಿಳಿಸಿದ್ದಾರೆ.

ಅತುಲ್ ಕುಮಾರ್ ತಿವಾರಿ ನೇತೃತ್ವದ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ ನಾಲ್ಕು ಸಾರಿಗೆ ನಿಗಮಗಳ ಸ್ಥಿತಿಗತಿ ಹಾಗೂ ದರ ಪರಿಷ್ಕರಣೆಯ ವಿವಿಧ ಅಂಶಗಳನ್ನು ಪರಿಶೀಲಿಸುತ್ತಿದೆ. ಸಮಿತಿ ವರದಿ ಸಲ್ಲಿಸಿದ ಬಳಿಕ ಅದನ್ನು ಸಚಿವ ಸಂಪುಟದ ಮುಂದೆ ಮಂಡಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಈ ಹಿಂದೆಯೂ ಹೇಳಿದ್ದರು.

ದಸರಾ ಒಳಗೆ ದರ ಏರಿಕೆಯಾಗುತ್ತಾ?

ದಸರಾ ಒಳಗೆ ಬಸ್ ಟಿಕೆಟ್ ದರ ಪರಿಷ್ಕರಣೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, “ಅದು ಈಗಲೇ ಹೇಳಲು ಸಾಧ್ಯವಿಲ್ಲ. ಮೊದಲು ವರದಿ ಸಲ್ಲಿಕೆಯಾಗಲಿ. ವರದಿಯಲ್ಲಿ ಏನೇನು ಶಿಫಾರಸುಗಳಿವೆ ಎಂಬುದನ್ನು ಪರಿಶೀಲಿಸಿ, ಮುಖ್ಯಮಂತ್ರಿ ಜೊತೆ ಚರ್ಚಿಸಿ ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img