ರಾಯಚೂರು : ಡಾಬಾವೊಂದರಲ್ಲಿ ಲೋಕಲ್ ಬ್ರ್ಯಾಂಡ್ ಎಣ್ಣೆ ಕಳ್ಳತನ ಮಾಡಿದ ಘಟನೆ ಲಿಂಗಸಗೂರು ತಾಲೂಕಿನ ಮಾಕಾಪೂರ ಗ್ರಾಮದಲ್ಲಿರುವ ಡಾಬಾದಲ್ಲಿ ನಡೆದಿದೆ. ಆರೋಪಿಗೆ ಡಾಬಾಕ್ಕೆ ನುಗ್ಗಿ ಲೋಕಲ್ ಬ್ರ್ಯಾಂಡ್ ಎಣ್ಣೆ ಕದಿಯುವ ಚಾಳಿ ಶುರುವಾಗಿತ್ತು.ಅಲ್ಲಿ ಹಣ ಇದ್ದರೂ ಅದನ್ನು ಮುಟ್ಟೇ ಕೇವಲ ಒಟಿ, ಚಾಯ್ಸ್ ಸೇರಿದಂತೆ ಲೋಕಲ್ ಬ್ರಾಂಡ್ನ ಮದ್ಯ ಎತ್ತಿಕೊಂಡು ಪರಾರಿಯಾಗುತ್ತಿದ್ದ.
ಲಿಂಗಸಗೂರು ತಾಲೂಕಿನ ಮಾಕಾಪೂರ ಗ್ರಾಮದಲ್ಲಿರುವ ಡಾಬಾದ ಮಾಲೀಕರು ಇದರಿಂದ ಬೇಸತ್ತಿದ್ದರು. ಮಾಲೀಕ ಬಸವರಾಜ್ ಅವರು ಆರೋಪಿಯನ್ನು ಹಿಡಿಯುವ ಉದ್ದೇಶದಿಂದ ಸಿಸಿ ಟಿವಿ ಕ್ಯಾಮೆರಾವನ್ನು ಅಳವಡಿಸಿದ್ದರು. ಆರೋಪಿ ಈ ಬಗ್ಗೆ ಅರಿಯದೇ ಒಳಗೆ ನುಗ್ಗಿ ಮತ್ತೆ ಎಣ್ಣೆಗಾಗಿ ತಡಕಾಡಿದಾಗ ಆತನ ಮುಖ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎಣ್ಣೆಯ ಆಸೆ ಶುರುವಾದ ತಕ್ಷಣ ಹಾವಿನಂತೆ ಸಂದಿಯಲ್ಲಿ ನುಗ್ಗಿ ಡಾಬಾಗೆ ಪ್ರವೇಶ ಪಡೆಯುತ್ತಿದ್ದ. ಬಳಿಕ ಅಲ್ಲಿನ ಡ್ರಾಯರ್ಗಳನ್ನು ತೆರೆದು ಎಣ್ಣೆ ತೆಗೆದುಕೊಂಡು ಪರಾರಿಯಾಗುತ್ತಿದ್ದ ಎನ್ನಲಾಗಿದೆ.