ಬೆಂಗಳೂರು: ಸಿದ್ದರಾಮಯ್ಯಗೆ ಅವರ ಪಕ್ಷದವರೇ ಬೆಂಬಲ ಕೊಡುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ನಾಯಕರು ಫ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಮೇಲೆ ಮುಡಾ ಹಗರಣ, ವಾಲ್ಮೀಕಿ ಹಗರಣದ ಆರೋಪ ಬಂದಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸೈಟ್ ವಾಪಸ್ ಕೊಟ್ಟಿದ್ದಾರೆ. ಸಿದ್ದರಾಮಯ್ಯಗೆ ಅವರ ಪಕ್ಷದವರೇ ಬೆಂಬಲ ಕೊಡುತ್ತಿಲ್ಲ. ಮುಸ್ಲಿಮರ ಒಲೈಕೆ ಮಾಡಿ ಉಳಿಯಬೇಕು ಎಂದು ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು.
ಇವರು ಹಿಂದುಗಳ ಮೇಲಿನ ಕೇಸ್ಗಳನ್ನು ವಾಪಸ್ಸು ಪಡೆದಿದ್ದಾರಾ? ಸಿಟಿ ರವಿ ಏನ್ ಕೇಸ್ ವಾಪಸ್ಸು ತೆಗಿರಿ ಅಂತಾ ಕೇಳಿಲ್ಲಾ. ಪೊಲೋಸರನ್ನ ಹೊಡೆದು, ಬೆಂಕಿ ಹಚ್ಚಿದವರ ಕೇಸ್ ವಾಪಸ್ಸು ಪಡೆದಿದ್ದಾರೆ. ಬಿಜೆಪಿ ಶಾಸಕ ಮುನಿರತ್ನಗೆ ಜೈಲಾಗಿದೆ. ಆದರೆ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮೇಲೆ ರೇಪ್ ಕೇಸ್ ಆಗಿದೆ, ಅವರಿಗೆ ಯಾಕೆ ಜೈಲಿಲ್ಲಾ ಎಂದು ಅಶೋಕ್ ಪ್ರಶ್ನಿಸಿದರು.