Kalaburgi: ಭಾರೀ ಮಳೆಗೆ ಧರೆಗುರುಳಿದ ಐತಿಹಾಸಿಕ ಮಳಖೇಡ ಕೋಟೆ!

0
Spread the love

ಕಲಬುರ್ಗಿ:- ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನೆನೆದು ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮಳಖೇಡದ ರಾಷ್ಟ್ರಕೂಟರ ಕೋಟೆ ಧರೆಗುರುಳಿದೆ.

Advertisement

ನಿನ್ನೆ ರಾತ್ರಿಯಿಂದ ಮಳೆ ಸುರಿದು ತೇವಗೊಂಡ ಹಿನ್ನಲೆ ಕೋಟೆಯ ಗೊಡೆ ಕುಸಿದಿದೆ. ಗೋಡೆ ಕುಸಿಯುತ್ತಿರುವ ವಿಡಿಯೋ ಸ್ಥಳೀಯರ ಮೊಬೈಲಲ್ಲಿ ಸೆರೆಯಾಗಿದೆ. ಕೋಟೆ ಗೊಡೆ ಕುಸಿದಿದ್ದರಿಂದ ಅಕ್ಕ ಪಕ್ಕದ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.

ಇನ್ನೂ ರಾಷ್ಟ್ರಕೂಟರ ರಾಜ ಅಮೋಘವರ್ಷ ನೃಪತುಂಗನ ರಾಜಧಾನಿಯಾಗಿದ್ದ ಮಳಖೇಡ ಗ್ರಾಮದ ಈ ಕೋಟೆ 2018 ರಲ್ಲಿ ಅಂದಾಜು 6 ಕೋಟಿ ವೆಚ್ಚದಲ್ಲಿ ಜೀರ್ಣೋದ್ದಾರಗೊಂಡಿತ್ತು ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here