ಲಾಹೋರ್: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಆಝಂ ಇತಿಹಾಸ ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 4,500 ರನ್‌ಗಳ ಗಡಿ ದಾಟಿದ ವಿಶ್ವದ ಮೊದಲ ಬ್ಯಾಟರ್ ಎಂಬ ಅಪೂರ್ವ ದಾಖಲೆಯನ್ನು ಬಾಬರ್ ತಮ್ಮದಾಗಿಸಿಕೊಂಡಿದ್ದಾರೆ.
ಲಾಹೋರ್‌ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಬಾಬರ್ ಆಝಂ 36 ಎಸೆತಗಳಲ್ಲಿ ಅಜೇಯ 50 ರನ್‌ಗಳನ್ನ ಬಾರಿಸಿದರು. ಈ ಅರ್ಧಶತಕದೊಂದಿಗೆ ಅವರ ಒಟ್ಟು ಟಿ20 ಅಂತಾರಾಷ್ಟ್ರೀಯ ರನ್ ಸಂಖ್ಯೆ 4,505ಕ್ಕೆ ಏರಿಕೆಯಾಯಿತು.
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇದುವರೆಗೆ 48 ಬ್ಯಾಟರ್‌ಗಳು 2,000ಕ್ಕೂ ಅಧಿಕ ರನ್‌ಗಳನ್ನು ಕಲೆಹಾಕಿದ್ದಾರೆ. ಇವರಲ್ಲಿ 12 ಮಂದಿ 3,000ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಆದರೆ 4,000 ರನ್‌ಗಳ ಗಡಿದಾಟಿರುವುದು ಕೇವಲ ಮೂವರು ಮಾತ್ರವಾಗಿದ್ದು, ಇದೀಗ 4,500 ರನ್‌ಗಳನ್ನು ದಾಟಿರುವ ಏಕೈಕ ಬ್ಯಾಟರ್ ಆಗಿ ಬಾಬರ್ ಆಝಂ ಹೊರಹೊಮ್ಮಿದ್ದಾರೆ.
ಬಾಬರ್ ಹೊರತುಪಡಿಸಿ ಯಾವುದೇ ಬ್ಯಾಟರ್ ಕೂಡ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4,250 ರನ್‌ಗಳ ಗಡಿ ದಾಟಿಲ್ಲ. ಈ ಪಟ್ಟಿಯಲ್ಲಿ ಭಾರತದ ಮಾಜಿ ಟಿ20 ನಾಯಕ ರೋಹಿತ್ ಶರ್ಮಾ ದ್ವಿತೀಯ ಸ್ಥಾನದಲ್ಲಿದ್ದು, ಅವರು 4,231 ರನ್‌ಗಳನ್ನು ಕಲೆಹಾಕಿದ್ದಾರೆ. ಮೂರನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 4,188 ರನ್‌ಗಳಿಸಿದ್ದಾರೆ.
ಪಾಕಿಸ್ತಾನ ಪರ ಇದುವರೆಗೆ 132 ಟಿ20 ಇನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಮಾಡಿದ ಬಾಬರ್ ಆಝಂ, 3 ಶತಕ ಹಾಗೂ 39 ಅರ್ಧಶತಕಗಳೊಂದಿಗೆ ಈ ದಾಖಲೆ ಸಾಧಿಸಿದ್ದಾರೆ. ಅವರ ನಿರಂತರ ಸಾಧನೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಅವರನ್ನು ಅಗ್ರಸ್ಥಾನಕ್ಕೆ ಕರೆದೊಯ್ದಿದೆ.



