ಕಲಬುರ್ಗಿ:- ಶ್ರೀಲಂಕಾ ಪ್ರವಾಸಕ್ಕೆ ಹೋಗಿದ್ದ ಕಲಬುರ್ಗಿ ಮೂಲದ ಟೆಕ್ಕಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಹೋಟೆಲ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವಾಗ ತಲೆಗೆ ಪೆಟ್ಟು ಬಿದ್ದು, ಈ ದುರ್ಘಟನೆ ಸಂಭವಿಸಿದೆ.
Advertisement
34 ವರ್ಷದ ಸಂತೋಷ್ ಮಲ್ಲೆದ್ ಮೃತ ಟೆಕ್ಕಿ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಸಂತೋಷ್, ಫೆ.15 ರಂದು ಸ್ನೇಹಿತರೊಂದಿಗೆ ಶ್ರೀಲಂಕಾದ ಕ್ಯಾಂಡಿಗೆ ಪ್ರವಾಸ ಕೈಗೊಂಡಿದ್ದರು. ಹೋಟೆಲ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುತ್ತಿದ್ದಾಗ ತಲೆಗೆ ಪೆಟ್ಟು ಬಿದ್ದು ಸಂತೋಷ್ ಮೃತಪಟ್ಟಿದ್ದಾರೆ.
ಟೆಕ್ಕಿ ಸಂತೋಷ್ ಮೃತದೇಹ ಶುಕ್ರವಾರ ಹೈದರಾಬಾದ್ ಮೂಲಕ ಕಲಬುರಗಿಗೆ ಆಗಮಿಸಲಿದೆ ಎಂದು ತಿಳಿದು ಬಂದಿದೆ.