ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಎರಡನೇ ಬಾರಿಗೆ ತಂದೆಯಾಗಿದ್ದಾರೆ. ಶುಕ್ರವಾರ ರಾತ್ರಿ ಹಿಟ್ ಮ್ಯಾನ್ ಪತ್ನಿ ರಿತಿಕಾ ಸಜ್ದೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಇದರೊಂದಿಗೆ ಹಿಟ್ಮ್ಯಾನ್ ಮನೆಗೆ ಹೊಸ ಅತಿಥಿಯ ಆಗಮನ ಆಗಿದೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ರೋಹಿತ್ ಶರ್ಮಾ ಲಭ್ಯರಾಗುವುದಿಲ್ಲ ಎಂದು ಹೇಳಲಾಗುತ್ತಿತ್ತು. ಆದರೆ ಮಗನ ಜನನದ ನಂತರ, ರೋಹಿತ್ ಶರ್ಮಾ ಈಗ ಆಸ್ಟ್ರೇಲಿಯಾ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಬಾರ್ಡರ್-ಗವಾಸ್ಕರ್ ಟ್ರೋಫಿಗೆ ರೋಹಿತ್ ಆಸ್ಟ್ರೇಲಿಯಾಕ್ಕೆ ಬರಲು ಸಾಧ್ಯವಾಗದಿದ್ದರೆ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸುವುದು ಖಚಿತವಾಗಿದೆ.
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ ಸ್ವದೇಶದಲ್ಲೇ ಟೀಂ ಇಂಡಿಯಾ ವೈಟ್‌ವಾಶ್ ಅನುಭವಿಸಿತು. WTC ಫೈನಲ್‌ಗೆ ಅರ್ಹತೆ ಪಡೆಯಲು ಮೆನ್ ಇನ್ ಬ್ಲೂ ಆಸ್ಟ್ರೇಲಿಯಾದಲ್ಲಿ ನಾಲ್ಕು ಅಥವಾ ಹೆಚ್ಚಿನ ಪಂದ್ಯಗಳನ್ನು ಗೆಲ್ಲುವ ಅಗತ್ಯವಿದೆ.
ಇನ್ನೂ ಕ್ರಿಕೆಟಿಗ ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನಿಸಿರುವುದಕ್ಕೆ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ.