‘ಭಾಗ್ಯಲಕ್ಷ್ಮೀ’, ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಗಳಲ್ಲಿ ನಟಿಸಿದ್ದ ಶೌರ್ಯ ಶಶಾಂಕ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಶೌರ್ಯ ಶಶಾಂಕ್ – ದಿಶಾ ಜಾಧವ್ ಕುಟುಂಬಸ್ಥರ ಸಮ್ಮುಖದಲ್ಲಿ ರಿಂಗ್ ಎಕ್ಸ್ಚೇಂಜ್ ಮಾಡಿಕೊಂಡಿದ್ದಾರೆ.
Advertisement
ಹೌದು ಬೆಂಗಳೂರಿನ ದಿಶಾ ಜಾಧವ್ ಎಂಬುವವರ ಜೊತೆ ಶೌರ್ಯ ನಿಶ್ಚಿತಾರ್ಥ ಜರುಗಿದ್ದು, ಸದ್ಯದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಬೆಂಗಳೂರಿನಲ್ಲಿ ಸಾಂಪ್ರದಾಯಿಕವಾಗಿ ನಟನ ನಿಶ್ಚಿತಾರ್ಥ ಕಾರ್ಯಕ್ರಮ ಜರುಗಿದೆ.
ಕುಟುಂಬಸ್ಥರ ಸಮ್ಮುಖದಲ್ಲಿ ದಿಶಾ ಜಾದವ್ ಮತ್ತು ಶೌರ್ಯ ಶಶಾಂಕ್ ಉಂಗುರ ಬದಲಿಸಿಕೊಂಡಿದ್ದಾರೆ. ಇದೀಗ ಈ ಜೋಡಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ.