ಹೆಚ್‌ಐವಿ ಏಡ್ಸ್ ಬಗ್ಗೆ ಅರಿವು ಮೂಡಿಸಿ : ಡಾ.ಲಿಂಗರಾಜು ಟಿ

0
HIV AIDS Control Awareness Programme
Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ : ಯುವಜನೋತ್ಸವ-2024ರ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಹೆಚ್‌ಐವಿ ಏಡ್ಸ್ ತಡೆಗಟ್ಟಲು ತೀವ್ರಗೊಳಿಸಿದ ಐಇಸಿ ಪ್ರಚಾರ ಆಂದೋಲನದ ನಿಮಿತ್ತ ಅಂತರ್ ಪದವಿ ಕಾಲೇಜುಗಳ 18ರಿಂದ 25 ವರ್ಷದೊಳಗಿನ ಪುರುಷ ಮತ್ತು ಮಹಿಳಾ ವಿದ್ಯಾರ್ಥಿಗಳಿಗೆ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು.

Advertisement

ನಗರದ ತಾಲೂಕಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು ಟಿ ಉದ್ಘಾಟಿಸಿ ಮಾತನಾಡಿ, ಹೆಚ್.ಐ.ವಿ/ಏಡ್ಸ್ ರೋಗಿಗಳ ಸಂಖ್ಯೆಯನ್ನು ಸೊನ್ನೆಗೆ ತರಲು ಸರ್ಕಾರ ಹಲವು ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಮೂಲಕ ಯುವ ಸಮುದಾಯಕ್ಕೆ ಅರಿವು ಮೂಡಿಸುತ್ತಿದೆ. ಹೆಚ್‌ಐವಿ ಖಾಯಿಲೆ ಮುಖ್ಯವಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ, ಸಂಸ್ಕರಿಸದ ಸೂಜಿ ಮತ್ತು ಸಿರಿಂಜ್‌ಗಳಿಂದ, ರಕ್ತ ಪರೀಕ್ಷೆ ಮಾಡದೇ ರಕ್ತ ಪಡೆಯುವುದರಿಂದ ಹಾಗೂ ಸೋಂಕಿತ ತಂದೆ-ತಾಯಿಂದ ಮಗುವಿಗೆ ಹರಡುತ್ತದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಪ್ರಚಾರ ಕೈಗೊಂಡು ಹೆಚ್‌ಐವಿ ಏಡ್ಸ್ ಹರಡದಂತೆ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಲು ಜಿಲ್ಲೆಯ ಎಲ್ಲಾ ಯುವಕರು ಹೆಚ್‌ಐವಿ ಏಡ್ಸ್ ಬಗ್ಗೆ ಅರಿವು ಹೊಂದಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಪ್ರಕಾಶ ವಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಪ್ರಕಾಶ ಹೆಚ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ., ಜಿಲ್ಲಾ ಹೆಚ್‌ಐವಿ ಏಡ್ಸ್ ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮೇಲ್ವಿಚಾರಕಾರದ ಮಾಹಾಂತೇಶ, ದೈಹಿಕ ಶಿಕ್ಷಣಾಧಿಕಾರಿಗಳು, ಉಪನ್ಯಾಸಕರು, ಆಪ್ತ ಸಮಾಲೋಚಕರು ಮುಂತಾದವರಿದ್ದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಶಶಿಧರ ಎ ಮಾತನಾಡಿ, ಹೆಚ್‌ಐವಿ ಏಡ್ಸ್ ತಡೆಗಟ್ಟಲು ಜಿಲ್ಲೆಯಲ್ಲಿ ಈಗಾಗಲೇ ಶಾಲಾ-ಕಾಲೇಜುಗಳಲ್ಲಿ, ಸಮುದಾಯದಲ್ಲಿ ನಿರಂತರವಾಗಿ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳಿಂದ ಜಾಗೃತಿ ಮೂಡಿಸಲಾಗುತ್ತಿದೆ. ಹೆಚ್‌ಐವಿ ಸೋಂಕಿತರನ್ನು ಗೌರವದಿಂದ ಕಾಣಬೇಕು. ಅವರಿಗೂ ಬದುಕುವ ಹಕ್ಕಿದೆ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಂಡು ಇತರರಿಗೂ ತಿಳಿಸಬೇಕೆಂದು ಹೇಳಿದರು.


Spread the love

LEAVE A REPLY

Please enter your comment!
Please enter your name here