ವಿಜಯಸಾಕ್ಷಿ ಸುದ್ದಿ, ಗದಗ : 2024ನೇ ಸಾಲಿನ ಶ್ರೀ ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಮುಂಜಾನೆ ಪರಮಪೂಜ್ಯ ಶ್ರೀ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಷಟ್‌ಸ್ಥಲ ಧ್ವಜಾರೋಹಣ ನೆರವೇರಿಸಿದರು.
Advertisement
ಜಾತ್ರಾ ಮಹೋತ್ಸವದ ಅಧ್ಯಕ್ಷ ಪ್ರೊ. ಕೆ.ಎಚ್. ಬೇಲೂರ, ಉಪಾಧ್ಯಕ್ಷ ಅಮರೇಶ ಚಾಗಿ, ಶ್ರೀದೇವಿ ಎಸ್.ಶೆಟ್ಟರ, ಶಿವಯ್ಯ ನಾಲತ್ವಾಡಮಠ, ಕಾರ್ಯದರ್ಶಿ ಪ್ರವೀಣ ವಾರಕರ, ಸಹ ಕಾರ್ಯದರ್ಶಿ ಗವಿಸಿದ್ದಪ್ಪ ಗಾಣಿಗೇರ, ಬರಕತಲಿ ಮುಲ್ಲಾ, ಚಂದ್ರಶೇಖರ ಇಟಗಿ, ಸಂಘಟನಾ ಕಾರ್ಯದರ್ಶಿ ತಿಮ್ಮರೆಡ್ಡಿ ಕೋನರೆಡ್ಡಿ, ಕೋಶಾಧ್ಯಕ್ಷ ವಿಶ್ವನಾಥ ಹಳ್ಳಿಕೇರಿ, ಸಹ ಕೋಶಾಧ್ಯಕ್ಷ ಅಜಯ ಮುನವಳ್ಳಿ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕಳಸಾಪೂರ, ದಾನಯ್ಯ ಗಣಾಚಾರಿ, ಮಾನ್ವಿ, ಮುರುಘರಾಜೇಂದ್ರ ಬಡ್ನಿ, ಬಸವರಾಜ ಹಿರೇಹಡಗಲಿ, ಎಂ.ಎಸ್. ಅಂಗಡಿ ಸೇರಿದಂತೆ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.