ಮಳೆ ಆರ್ಭಟ: ನಾಳೆ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

0
Spread the love

ಚಿಕ್ಕಮಗಳೂರು:- ಭಾರೀ ಮಳೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

Advertisement

ಧಾರಾಕಾರ ಮಳೆ ಹಿನ್ನೆಲೆ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, N.R.ಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ‌ರಜೆ‌ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಜೊತೆಗೆ ಜುಲೈ 31 ರಿಂದ ಅಗಸ್ಟ್ 1 ರ ವರೆಗೂ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾದ ಹಿನ್ನಲೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎರಡು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ತಹಶೀಲ್ದಾರ್​ಗಳು ಆದೇಶಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನಲ್ಲಿ ಧಾರಾಕಾರ ಮಳೆ ಹಿನ್ನೆಲೆ ತಹಶೀಲ್ದಾರ್ ಜಕ್ಕನಗೌಡರ್ ರಜೆ ಘೋಷಣೆ ಮಾಡಿದ್ದಾರೆ


Spread the love

LEAVE A REPLY

Please enter your comment!
Please enter your name here