ಬೆಂಗಳೂರು: ಸ್ಯಾಂಡಲ್ವುಡ್ನ ಈ ಸ್ವರ್ಣ ಸುಂದರಿಯ ಕೇಸ್ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಇದೀಗ ಈ ಪ್ರಕರಣದ ಸಿಐಡಿ ತನಿಖೆಗೆ ವಹಿಸಿದ್ದ ಆದೇಶವನ್ನ ರಾಜ್ಯ ಸರ್ಕಾರ ವಾಪಸ್ ಪಡೆದು ಅಚ್ಚರಿ ಮೂಡಿಸಿದ್ದು, ಇದರ ಬೆನ್ನಲ್ಲೇ ಚಿನ್ನ ಕಳ್ಳಸಾಗಣೆ ಕೇಸಲ್ಲಿ ಗೃಹ ಇಲಾಖೆಯೇ ಶಾಮೀಲು ಆಗಿದೆ ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು ಆರೋಪಿಸಿದ್ದಾರೆ. ರನ್ಯಾ ರಾವ್ ಕೇಸ್ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು,
ಇಂತಹ ಮಾಫಿಯಾಗಳು ಹೆಚ್ಚಾಗಿ ತಲೆ ಎತ್ತುತ್ತಿವೆ. ಗೃಹ ಇಲಾಖೆ ಸರಿಯಾಗಿ ಕೆಲಸ ಮಾಡ್ತಿಲ್ಲ. ದಕ್ಷ ಅಧಿಕಾರಿಗಳು ಇದ್ದರೂ ಸರ್ಕಾರ ಸರಿಯಾಗಿ ಬಳಕೆ ಮಾಡಿಕೊಳ್ತಿಲ್ಲ. ರನ್ಯಾ ರಾವ್ ಅನೇಕ ಬಾರಿ ದುಬೈಗೆ ಹೋಗಿ ಬಂದಿದ್ದಾರೆ. ತಂದೆ IPS ಅಧಿಕಾರಿ ಅಂತ ರನ್ಯಾಗೆ ರಕ್ಷಣೆ ಕೊಡ್ತಿದ್ದಾರಾ ಎಂದು ಅನುಮಾನ ವ್ಯಕ್ತಪಡಿಸಿದರು.
ಪೊಲೀಸರ ರಕ್ಷಣೆಯಲ್ಲಿ ರನ್ಯಾ ಓಡಾಡಿದ್ದಾಳೆ. ಸರ್ಕಾರಕ್ಕೆ ನಾಚಿಕೆ ಆಗಬೇಕು.14 ಕೆಜಿ ಚಿನ್ನ ಸಾಗಾಣೆ ಮಾಡ್ತಾರೆ ಅಂದರೆ ಗೃಹ ಇಲಾಖೆ ಇದರಲ್ಲಿ ಶಾಮೀಲಾಗಿದೆ ಅನ್ನಿಸುತ್ತೆ. ಸಿಐಡಿ ತನಿಖೆ ಯಾಕೆ ವಾಪಸ್ ಪಡೆದ್ರಿ? ಇದು ನಮಗೆ ಅನುಮಾನ ಬರ್ತಿದೆ. ರನ್ಯಾ ರಾವ್ ಉಳಿಸೋಕೆ ಸರ್ಕಾರ ಮುಂದಾಗ್ತಿರುವ ಅನುಮಾನ ಬರ್ತಿದೆ ಎಂದು ತಿಳಿಸಿದರು.