ಚಿತ್ರದುರ್ಗ:- ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಜೆಬಿ ಹಳ್ಳಿಯಲ್ಲಿ ಮದುವೆಯಾಗಲು ಹೆಣ್ಣು ಸಿಗಲಿಲ್ಲವೆಂದು ಮನನೊಂದ ಗೃಹ ರಕ್ಷಕ ದಳದ ಸಿಬ್ಬಂದಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಜರುಗಿದೆ.
Advertisement
31 ವರ್ಷದ ತಿರುಮಲ ಮೃತ ಹೋಂ ಗಾರ್ಡ್. ತಿರುಮಲ ರಾಂಪುರ ಪೊಲೀಸ್ ಠಾಣೆಯಲ್ಲಿ ಹೋಂ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ತಿರುಮಲ ಹಲವು ವರ್ಷಗಳಿಂದ ಮದುವೆ ಮಾಡಿಕೊಳ್ಳಲು ಹೆಣ್ಣು ಹುಡುಕುತ್ತಿದ್ದು, ವಯಸ್ಸಾಗ್ತಿದೆ ಮದುವೆ ಮಾಡಿಕೊಳ್ಳಬೇಕು ಎನ್ನುವ ಚಿಂತೆಗೆ ಬಿದ್ದಿದ್ದರು. ಅಲ್ಲದೇ ಇತ್ತೀಚಿಗೆ ಮೂರು ಕಡೆ ಹೆಣ್ಣು ನೋಡಲು ತೆರಳಿದ್ದು, ಹೆಣ್ಣಿನ ಕಡೆಯವರಿಂದ ತಿರಸ್ಕಾರಗೊಂಡ ಪರಿಣಾಮ ಹೆಚ್ಚು ಘಾಸಿಯಾಗಿತ್ತು.
ಮದುವೆ ಬಗ್ಗೆಯೇ ತೀವ್ರ ಯೋಚಿಸುತ್ತಿದ್ದ ತಿರುಮಲ ಮನನೊಂದು, ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.