ನವದೆಹಲಿ:- ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದೆ ಎಂದು ಹೇಳುವ ಮೂಲಕ 2025 ರ ಕೇಂದ್ರ ಬಜೆಟ್‌ನಲ್ಲಿ ತೆರಿಗೆ ಕಡಿತವನ್ನು ಸಚಿವ ಅಮಿತ್ ಶಾ ಶ್ಲಾಘಿಸಿದರು.
ಬಜೆಟ್ ನಲ್ಲಿ 12 ಲಕ್ಷ ವಾರ್ಷಿಕ ಆದಾಯ ಹೊಂದಿರುವವರಿಗೆ ತೆರಿಗೆಯಿಂದ ವಿನಾಯಿತಿ ನೀಡಿರುವ ಬಗ್ಗೆ X ಮಾಡಿರುವ ಅಮಿತ್ ಅವರು, ಮಧ್ಯಮ ವರ್ಗದ ಆರ್ಥಿಕ ಯೋಗಕ್ಷೇಮವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುನ್ನಡೆದಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲಾ ಫಲಾನುಭವಿಗಳಿಗೆ ಅಭಿನಂದನೆಗಳು ಎಂದು ಅಮಿತ್ ಶಾ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.
ಬಜೆಟ್ ನಲ್ಲಿ ಘೋಷಿಸಿದ್ದೇನು?
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಕೇಂದ್ರ ಬಜೆಟ್ 2025 ಅನ್ನು ಮಂಡಿಸುತ್ತಾ, ಹೊಸ ತೆರಿಗೆ ವ್ಯವಸ್ಥೆಯಡಿಯಲ್ಲಿ 12 ಲಕ್ಷ ರೂ.ಗಳವರೆಗೆ – ಅಂದರೆ ಪ್ರಮಾಣಿತ ಕಡಿತಗಳನ್ನು ಒಳಗೊಂಡಂತೆ 12.75 ಲಕ್ಷ ರೂ.ಗಳವರೆಗೆ ಯಾವುದೇ ಆದಾಯ ತೆರಿಗೆಯನ್ನು ಪಾವತಿಸಲಾಗುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ.