ಹನಿಟ್ರ್ಯಾಪ್ ಪ್ರಕರಣ: ಸಿಎಂ ಭೇಟಿಯಾಗಿ ಸಾಕ್ಷ್ಯ ನೀಡಿದ ಸಚಿವ ರಾಜಣ್ಣ ಪುತ್ರ!

0
Spread the love

ಬೆಂಗಳೂರು:– ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರ ಪುತ್ರ ವಿಧಾನಪರಿಷತ್‌ ಸದಸ್ಯ ರಾಜೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಿದ್ದಾರೆ.

Advertisement

ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್ ಎಂಎಲ್‌ಸಿ ರಾಜೇಂದ್ರ ರಾಜಣ್ಣ, ಹನಿಟ್ರ್ಯಾಪ್ ಯತ್ನ ಸಂಬಂಧ ಎಲ್ಲಾ ಸಾಕ್ಷ್ಯಗಳನ್ನು ಸಿಎಂಗೆ ನೀಡಿದ್ದೇನೆ. ಸೋಮವಾರ ಅಥವಾ ಮಂಗಳವಾರ ಡಿಜಿ&ಐಜಿಪಿಗೆ ದೂರು ಸಲ್ಲಿಸುವೆ. ನನಗೆ ಹನಿಟ್ರ್ಯಾಪ್ ನಡೆಸಲು ಕಳೆದ 3 ತಿಂಗಳಿಂದ ಯತ್ನ ನಡೆಸಿದ್ದರು. ಹನಿಟ್ರ್ಯಾಪ್ ನಡೆಸಲು ನಮ್ಮ ಮಧುಗಿರಿ ನಿವಾಸಕ್ಕೂ ಬಂದಿದ್ದರು. ಬೆಂಗಳೂರಿನ ಸರ್ಕಾರಿ ನಿವಾಸಕ್ಕೂ ಬಂದು ಹನಿಟ್ರ್ಯಾಪ್‌ಗೆ ಯತ್ನಿಸಿದ್ದರು. ಯಾವ ಕಾರಣಕ್ಕಾಗಿ ನನಗೆ ಹನಿಟ್ರ್ಯಾಪ್‌ಗೆ ಯತ್ನಿಸಿದ್ದರೆಂದು ಗೊತ್ತಿಲ್ಲ. ಯಾರೆಂದು ಹೇಗೆ ಹೇಳೋದು?, ತನಿಖೆಯಾಗಲಿ ಎಲ್ಲ‌ ಹೊರಬರುತ್ತೆ ಎಂದಿದ್ದಾರೆ.

ನಮ್ಮ ತಂದೆಯವರಷ್ಟೇ ಅಲ್ಲ ಯಾರಿಗೂ ಈ ರೀತಿಯಾಗಿ ಆಗಬಾರದು. ಎಲ್ಲರ ಮನೆಯಲ್ಲೂ ಹೆಣ್ಮಕ್ಕಳು ಇರ್ತಾರಲ್ವಾ?, ಈ ರೀತ್ರಿ ಆದರೆ ಹೇಗೆ? ಪ್ರಕರಣದ ಬಗ್ಗೆ ಹಿರಿಯ ಐಪಿಎಸ್‌ ಅಧಿಕಾರಿ ನೇತೃತ್ವದಲ್ಲಿ ತನಿಖೆ ಆಗಲಿ. ಡಿಜಿ&ಐಜಿಪಿಗೆ ದೂರು ಸಲ್ಲಿಸಿದ ನಂತರ ದೆಹಲಿಗೆ ಹೋಗುತ್ತೇವೆ ಎಂದರು.

ಇನ್ನೂ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಇದೀಗ ಹನಿಟ್ರ್ಯಾಪ್‌ ತಲೆಬಿಸಿ ಎದುರಾಗಿದೆ. ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಹಾಗೂ ಅವರ ಪುತ್ರ ರಾಜೇಂದ್ರ ಅವರಿಗೆ ಹನಿಟ್ರ್ಯಾಪ್‌ ಯತ್ನ ನಡೆದಿದೆ ಎಂಬ ವಿಚಾರ ಸದನದಲ್ಲೇ ಬಹಿರಂಗವಾದ ಬಳಿಕ ರಾಜ್ಯ ರಾಜಕೀಯವಲಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಹನಿಟ್ರ್ಯಾಪ್‌ ಹಿಂದಿರುವುದು ಕೂಡ ಪ್ರಭಾವಿ ರಾಜಕಾರಣಿ ಎಂದು ಹೇಳಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here