ಹುಬ್ಬಳ್ಳಿ:- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಗೋವಿಂದ ಕಾರಜೋಳ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ.
ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿದ ಅವರು, ಹನಿಟ್ರ್ಯಾಪ್ ವಿಚಾರವನ್ನು ಸದನದಲ್ಲಿ ಸ್ವತಃ ಹಿರಿಯ ಸಚಿವರಾದ ರಾಜಣ್ಣ ಹೇಳಿದ್ದಾರೆ ಇದು ಗಂಭೀರವಾದ ಆರೋಪ ಆಗಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು ಎಂದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ಇಲ್ಲ ಸಿಡಿ ಮಾಡಿದವರು ಯಾರು ಅಂತಹವರನ್ನು ಸಂಪುಟದಿಂದ ವಜಾ ಮಾಡಬೇಕಿತ್ತು. ಮಾನ ಮರ್ಯಾದೆ ಇಲ್ಲದೆ ಅಧಿಕಾರಕ್ಕೆ ಅಂಟಿಕೊಂಡು ಕುಳಿತಿರುವುದು ಸರಿಯಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.
ಸಿಡಿ ಇಟ್ಟುಕೊಂಡು ಫೈಲ್ ಗಳನ್ನು ಸಹಿ ಮಾಡಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಿ ನಿಷ್ಪಕ್ಷಪಾತವಾದ ತನಿಖೆ ನಡೆಸಬೇಕು. ರಾಜಕಾರಣಿಗಳ ಬಗ್ಗೆ ಗೌರವ ಕಡಿಮೆ ಆಗುತ್ತಿದೆ. ಸ್ವಚ್ಛ ನಡವಳಿಕೆಯಿಂದ ರಾಜಕಾರಣಿಗಳು ಆದರ್ಶವಾಗಿ ಕಾಣಬೇಕಿತ್ತು. ಆದರೆ ಇಂದು ರಾಜಕಾರಣಿಗಳು ರಾಕ್ಷಸರಾಗಿ ಕಾಣುತ್ತಿದ್ದಾರೆ. ಇನ್ನೂ ಕಾಲ ಮಿಂಚಿಲ್ಲ ಸಿದ್ದರಾಮಯ್ಯ ರಾಜೀನಾಮೆ ನೀಡಲಿ. ಎಲ್ಲಾ ನೋಡಿಕೊಂಡು ಮೌನವಾಗಿದ್ದರೆ, ನಡೆಯುವುದಿಲ್ಲ ಎಂದು ಗೋವಿಂದ ಕಾರಜೋಳ ಅವರು ಹೇಳಿದರು.