ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಸಮಾಜದ ಶ್ರೇಯೋಭಿವೃದ್ಧಿಗಾಗಿ ಸೇವಾ ಮನೋಭಾವನೆಯಿಂದ ಸೇವೆ ಸಲ್ಲಿಸುವ ಮಹನೀಯರನ್ನು ಗೌರವಿಸುವ ಮೂಲಕ ಸಮಾಜ ಸೇವೆಗೆ ಪ್ರೇರೇಪಿಸುವುದು ಮುಖ್ಯವಾಗಿದೆ ಎಂದು ಗದಗ ಜಿಲ್ಲಾ ಚೆಸ್ ಅಸೋಸಿಯೇಶನ್ ಅಧ್ಯಕ್ಷ ಗಿರೀಶ ಅಗಡಿ ಹೇಳಿದರು.
ಅವರು ಮಂಗಳವಾರ ಪಟ್ಟಣದಲ್ಲಿ ಗದಗ ಜಿಲ್ಲಾ ಚೆಸ್ ಅಸೋಸಿಯೇಶನ್ ವತಿಯಿಂದ ರಾಜ್ಯ ಪ್ರಶಸ್ತಿ ಪುರಸ್ಕೃತ ಲಕ್ಮೇಶ್ವರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ. ಶ್ರೀಕಾಂತ ಕಾಟೇವಾಲೆ, ಪತ್ರಕರ್ತ ದಿಗಂಬರ ಪೂಜಾರ ಅವರನ್ನು ಸನ್ಮಾನಿಸಿ ಮಾತನಾಡಿದರು.
ಈ ವೇಳೆ ಗೌರವಾಧ್ಯಕ್ಷ ಆರ್.ವಿ. ವೆರ್ಣೇಕರ ಮಾತನಾಡಿದರು. ಎಂ.ಆಯ್. ಕಣಿಕೆ, ಶ್ರೀಕಾಂತ ಪೂಜಾರ, ಆದೇಶ ಹುಲಗೂರ, ವಾಸು ಪಾಟೀಲ, ಫಕ್ಕಿರೇಶ ಜಂತ್ಲಿ ಮುಂತಾದವರು ಉಪಸ್ಥಿತರಿದ್ದರು.



