ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾಧ್ಯಕ್ಷ ಹನಮಂತಪ್ಪ ಹೆಚ್.ಅಬ್ಬಿಗೇರಿ ಅವರಿಗೆ ತಮಿಳುನಾಡಿನ ಏಷಿಯಾ ಇಂಟರ್‌ನ್ಯಾಷನಲ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿ ಹಾಗೂ ಏಷ್ಯಾ ಇಂಟರ್‌ನ್ಯಾಷನಲ್ ಕಲ್ಚರ್ ಅಕಾಡೆಮಿ ವತಿಯಿಂದ ನಾಡು, ನುಡಿ ಹಾಗೂ ಸಮಾಜ ಸೇವೆಯಲ್ಲಿ ಕಳೆದ 22 ವರ್ಷಗಳ ಸುದೀರ್ಘ ಸೇವೆಯನ್ನು ಗುರುತಿಸಿ 2025ನೇ ಸಾಲಿನ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ.
Advertisement
ಎಪ್ರಿಲ್ 26ರಂದು ಬೆಂಗಳೂರಿನ ಹೊಸೂರು ಕ್ಲಾರೆಸ್ಟಾ ಸಾಂಸ್ಕೃತಿಕ ಭವನದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಲಾಗುವುದು. ಇವರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಸಮಸ್ತ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಅಭಿನಂದನೆ ತಿಳಿಸಿದ್ದಾರೆ.