ಸಾಧಕರಿಗೆ ಸನ್ಮಾನ

0
Spread the love

ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಇಲ್ಲಿಯ ಹೊಸಪೇಟ ಚೌಕ್ ಓಣಿಯಲ್ಲಿರುವ ಶ್ರೀಕಾಳಿಕಾದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಸಭೆ, ಪ್ರತಿಭಾ ಪುರಸ್ಕಾರ ಮತ್ತು ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಹಾಗೂ ಹವ್ಯಾಸಿ ರಂಗಕರ್ಮಿ ಮೌನೇಶ ಚಿ. ಬಡಿಗೇರ (ನರೇಗಲ್ಲ), ನಿವೃತ್ತ ಬಿಸಿಯೂಟ ನೌಕರರಾದ ಶೋಭಾ ನರಗುಂದ, ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸತೀಶ ಹೊರಪೇಟಿ ಅವರನ್ನು ಸನ್ಮಾನಿಸಲಾಯಿತು.

Advertisement

ಕಿತ್ತೂರ ಕರ್ನಾಟಕ ಕನ್ನಡ ಪ್ರಾದೇಶಿಕ ದಿನಪತ್ರಿಕೆಯ ಸಂಪಾದಕರು ಹಾಗೂ ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘದ ರಾಜ್ಯ ಉಪಾಧ್ಯಕ್ಷ ಮಂಜುನಾಥ ಬಸಪ್ಪ ಅಬ್ಬಿಗೇರಿ, ಹಿರಿಯ ಸಾಹಿತಿ ಡಿ.ವಿ. ಬಡಿಗೇರ, ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಗೋಪಾಲ ಡಿ. ಕಡ್ಲಿಕೊಪ್ಪ, ವರವಿ ಶ್ರೀಮೌನೇಶ್ವರ ದೇವಸ್ಥಾನ ಹಾಗೂ ಮಠದ ವಿಕಾಸ ಟ್ರಸ್ಟ್ ಕಮಿಟಿ ಅಧ್ಯಕ್ಷ ಮೋಹನ ಎಸ್. ನರಗುಂದ, ಪ್ರವಚನಕಾರರಾದ ರಾಮಕೃಷ್ಣ ಕಲ್ಯಾಣಿ, ಬೆಟಗೇರಿ ಕಾಳಿಕಾದೇವಿ ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಶ್ರೀಧರ ಎಸ್. ಕೊಣ್ಣೂರ, ಬಾಲರಾಜ ಕೊಣ್ಣೂರ, ವೀರೇಶ ಅಂ. ಅಕ್ಕಸಾಲಿ, ಅಶೋಕ ಸುತಾರ ಪಾಲ್ಗೊಂಡಿದ್ದರು.

 


Spread the love

LEAVE A REPLY

Please enter your comment!
Please enter your name here