ದೊಡ್ಡಬಳ್ಳಾಪುರ: ಬುಲೆರೋ ಕಾರು ಮತ್ತು ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ನಾರಸಿಂಹನಹಳ್ಳಿ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಮದುವೆ ಆಮಂತ್ರಣ ನೀಡಲು ದೇವನಹಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ತಕ್ಷಣವೇ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ವಿವರಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.
ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದೆ.



