ಬೈಕ್-ಲಾರಿ ನಡುವಿನ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು..!

0
Spread the love

ಮೈಸೂರು: ಬೈಕ್ ಮತ್ತು ಲಾರಿ ನಡುವಿನ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

Advertisement

ಹಂಚಿಪುರ ಗ್ರಾಮದ ನಿವಾಸಿಗಳಾದ ಚೆನ್ನಮಲ್ಲಮ್ಮ, ಮಗಳು ರೂಪ, ಅಳಿಯ ಚಿನ್ನಸ್ವಾಮಿ ಮೃತ ದುರ್ದೈವಿಗಳಾಗಿದ್ದು, ಚಿಕ್ಕಸ್ವಾಮಿ, ಪತ್ನಿ ರೂಪಾ ಮತ್ತು ಚನ್ನಮಲ್ಲಮ್ಮ ಅವರಿದ್ದ ಬೈಕ್ ಗೆ ಲಾರಿ ಡಿಕ್ಕಿ ಹೊಡೆದಿದೆ.

ಗುದ್ದಿದ ರಭಸಕ್ಕೆ ಮೂವರೂ ರಸ್ತೆ ಮೇಲೆ ಬಿದ್ದಿದ್ದಾರೆ. ಈ ವೇಳೆ, ಲಾರಿಯು ಅವರ ಮೇಲೆ ಹರಿದಿದೆ. ಚಕ್ರಕ್ಕೆ ಸಿಲುಕಿದ ಮೂವರು ನುಜ್ಜುಗುಜ್ಜಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here