ಕಲಬುರಗಿ: ಕಲಬುರಗಿಯಲ್ಲಿ ಭೀಕರ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಮಗದಂಪುರ ಬಳಿ ನಡೆದಿದೆ.
Advertisement
ಅವಿನಾಶ್(24), ಅಭಿಷೇಕ್(26), ಸಂಜೀವ್(40) ಮೃತ ದುರ್ದೈವಿಗಳಾಗಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ.
ಕಾರಿನಲ್ಲಿದ್ದವರು ಬೀದರ್ನಿಂದ ತೆಲಂಗಾಣದ ಧಾರೂರಿನತ್ತ ತೆರಳುತ್ತಿದ್ದರು. ಈ ವೇಳೆ ತೆಲಂಗಾಣದಿಂದ ಚಿಂಚೋಳಿ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಮೂವರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.