ಚಾಮರಾಜನಗರ:- ಜಿಲ್ಲೆಯ ಹನೂರು ತಾಲೂಕಿನ ತಾಳಬೆಟ್ಟದ ಬಳಿ KSRTC ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಜರುಗಿದೆ.
20 ವರ್ಷದ ಪ್ರದೀಪ್, 21 ವರ್ಷದ ಭಾವೀಶ್(21) ಮೃತ ದುರ್ದೈವಿಗಳು. ಮೃತರು ಪಲ್ಸರ್ ಬೈಕ್ನಲ್ಲಿ ಮಲೆಮಹದೇಶ್ವರಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ತಾಳಬೆಟ್ಟ ಬಳಿ ಮಹದೇಶ್ವರಬೆಟ್ಟದಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್ನ ಹಿಂಬದಿ ಕುಳಿತಿದ್ದ ಪ್ರದೀಪ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಅಪಘಾತದಲ್ಲಿ ತೀವ್ರ ರಕ್ತಸ್ರಾವವಾಗಿದ್ದ ಭಾವೀಶ್ ಎಂಬಾತನನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಮೃತದೇಹಗಳನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



