ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರ ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ. ಬೈಕ್‌ಗೆ ಕ್ಯಾಂಟರ್ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.
Advertisement
ಪ್ರಕಾಶ್, ಕೃಷ್ಣ ಮೃತರು. ಅಂದಹಾಗೆ ಈ ಇಬ್ಬರು ಯುವಕರು ಚಿಕ್ಕಬಳ್ಳಾಪುರ ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಮಾರ್ನಿಂಗ್ ಶಿಫ್ಟ್ ಇದ್ದ ಕಾರಣ ಬೆಳಿಗ್ಗೆ ಜೊತೆಯಾಗಿ ಒಂದೇ ಬೈಕಿನಲ್ಲಿ ಕೆಲಸಕ್ಕೆ ಬರ್ತಿದ್ದರು.
ಈ ವೇಳೆ ಪೋಶೆಟ್ಟಿಹಳ್ಳಿ ಬಳಿ ವೇಗವಾಗಿ ಬಂದ ಕ್ಯಾಂಟರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ತಲೆಗೆ ಗಂಭೀರವಾದ ಗಾಯಗಳಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.