ಗಾಂಧಿನಗರ:- ಗುಜರಾತ್‌ನ ಪಠಾಣ್‌ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಸರ್ಕಾರಿ ಬಸ್ ಹಾಗೂ ಆಟೋರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಈ ದುರಂತ ಸಂಭವಿಸಿದೆ.
Advertisement
ರಾಜ್ಯ ಸಾರಿಗೆ ಬಸ್ ಹಿಮ್ಮತ್‌ನಗರದಿಂದ ಕಚ್ ಕಡೆಗೆ ಹೋಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಟೋರಿಕ್ಷಾಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಆಟೋರಿಕ್ಷಾದಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಪರಿಣಾಮ ಆಟೋರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.
ಮಾಹಿತಿ ಆಧರಿಸಿ ಕೂಡಲೇ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


