ಹಾವೇರಿ: ಭೀಕರ ರಸ್ತೆ ಅಪಘಾತ ಸಂಭವಿಸಿ ಆರು ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಮೃತರನ್ನು ಫರಾನ್ (27 ವರ್ಷ), ಉಮ್ಮಿಶಿಪಾ (16), ಅಲಿಷಾ (20), ಫೂಲಖಾನ್ (17) ಹಾಗೂ ಫಿರೋಜ್ (42) ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಶವ ಯಾರದ್ದು ಎಂಬ ಬಗ್ಗೆ ಮಾಹಿತಿ ಗೊತ್ತಾಗಬೇಕಿದೆ. ತಷ್ಕಿನ್ ರಾಣೆಬೆನ್ನೂರು, ಪಿರೋಜ್ ಗಾಯಗೊಂಡವರಾಗಿದ್ದು, ಹರಿಯಾಣ ಮೂಲದ ಆಡಿ-ಎ6 ಕಾರು ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.



