ಹಾವೇರಿ: ಪ್ರವಾಸಿಗರಿದ್ದ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮಹಾರಾಷ್ಟ್ರಕ್ಕೆ ವಾಪಸಾಗುತ್ತಿದ್ದ ಪ್ರವಾಸಿಗರ ಬಸ್, ಮಾರ್ಗಮಧ್ಯೆ ಲಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಚಾಲಕ ನಿದ್ರೆಯ ಮಂಪರಿನಲ್ಲಿದ್ದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.









