ಕೋಲಾರ: ಓವರ್ ಟೇಕ್ ಮಾಡಲು ಹೋಗಿ ಬೈಕ್ ಕಾರಿಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಕೊತ್ತೂರು ಗ್ರಾಮದ ಬಳಿ ನಡೆದಿದೆ. ಗಾಂಧಿನಗರ ನಿವಾಸಿ ಚಂದ್ರಶೇಖರ್ (50) ಮೃತ ದುರ್ಧೈವಿಯಾಗಿದ್ದು,
Advertisement
ಘಟನೆಯಲ್ಲಿ ಮತ್ತೊಬ್ಬ ಬೈಕ್ ಸವಾರ ಸುರೇಶ್‌ಗೆ ಕಾಲು ಮುರಿದಿದ್ದು, ಸಣ್ಣ ಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅತಿ ವೇಗವಾಗಿ ಓವರ್‌ಟೇಕ್ ಮಾಡಲು ಹೋಗಿ ಬೈಕ್ ಕಾರಿಗೆ ಡಿಕ್ಕಿಯಾಗಿದೆ. ಘಟನೆ ಬಳಿಕ ಕಾರನ್ನು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.