ತುಮಕೂರಿನಲ್ಲಿ ಭೀಕರ ಕೃತ್ಯ; ಇಬ್ಬರು ಮಕ್ಕಳನ್ನು ಕೊಂದು ಸೂಸೈಡ್ ಮಾಡ್ಕೊಂಡ ತಾಯಿ!

0
Spread the love

ತುಮಕೂರು:- ಪಾವಗಡದಲ್ಲಿ ಮನಕಲಕುವ ಕೃತ್ಯ ಒಂದು ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.

Advertisement

23 ವರ್ಷದ ಸರಿತಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಆತ್ಮಹತ್ಯೆಗೂ ಮುನ್ನ 4 ವರ್ಷದ ಮಗ ಕೌಶಿಕ್ ಹಾಗೂ 2 ವರ್ಷದ ಮಗು ಯುಕ್ತಿಯನ್ನು ಕೊಲೆ ಮಾಡಿದ್ದಾರೆ. ಬಳಿಕ ತಾವೂ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸರಿತಾ ತನ್ನ ಇಬ್ಬರು ಮಕ್ಕಳ ಹತ್ಯೆಗೈದು, ಬಳಿಕ ತಾನು ನೇಣಿಗೆ ಶರಣಾಗಿದ್ದಾರೆ. ಮೂಲತಃ ಕಡಪನಕೆರೆಯ ಸರಿತಾ ತನ್ನದೇ ಊರಿನ ಸಂತೋಷ್ ಜೊತೆ ವಿವಾಹವಾಗಿದ್ದರು. ಕಳೆದ 6 ವರ್ಷಗಳ ಹಿಂದೆ ಸಂತೋಷ್ ಜೊತೆ ವಿವಾಹವಾಗಿತ್ತು.

ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಸಂತೋಷ್ ಈ ಘಟನೆ ನಡೆದ ವೇಳೆ ಮನೆಯಲ್ಲಿರಲಿಲ್ಲ. ಮದುವೆಯಾದಾಗಿನಿಂದ ಪತಿ ಹಾಗೂ ಆತನ ಕುಟುಂಬದಿಂದ ಸರಿತಾ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ವರದಕ್ಷಿಣೆ ಕಿರುಕುಳ ನೀಡಿದ್ದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ನೊಂದು ಮಕ್ಕಳ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.


Spread the love

LEAVE A REPLY

Please enter your comment!
Please enter your name here