ದೇವನಹಳ್ಳಿ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಡಿಯೋ ಹಾಗೂ ಸ್ಪ್ಲೆಂಡರ್ ಪ್ಲಸ್ ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡು ಬೈಕ್ಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಈ ದುರ್ಘಟನೆಯಲ್ಲಿ ನರಸಿಂಹಪ್ಪ ಎಂಬುವವರು ಸಾವನ್ನಪ್ಪಿದ್ದಾರೆ.
ಮೃತ ನರಸಿಂಹಪ್ಪ ಅವರು ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ, ದೇವನಹಳ್ಳಿಯ ಚಪ್ಪರದಕಲ್ಲು ಸಮೀಪ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದ ದೃಶ್ಯ ರಾಷ್ಟ್ರೀಯ ಹೆದ್ದಾರಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದ್ದು, ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.



