ಆನೇಕಲ್:- ಆನೇಕಲ್-ಚಂದಾಪುರ ಮುಖ್ಯರಸ್ತೆಯ ಆವಡದೇನಹಳ್ಳಿ ಗೇಟ್ ಬಳಿ ಅಡ್ಡಬಂದ ಸೈಕಲ್ ಸವಾರನ ತಪ್ಪಿಸಲು ಹೋಗಿ ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿರುವ ಘಟನೆ ಜರುಗಿದೆ.
ಅಬ್ದುಲ್ ಸತ್ತಾರ್(26) ಮೃತ ಬೈಕ್ ಸವಾರ. ಈತ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಅದಾಗಲೇ ಅವರು ಮೃತಪಟ್ಟಿರೋದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ಭಿಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.



