ನೆಲಮಂಗಲ: ನಗರದ ಪೇಟೆ ಬೀದಿಯಲ್ಲಿ ಕತ್ತು ಹಿಸುಕಿ ವೃದ್ಧೆಯನ್ನು ಹತ್ಯೆ ಮಾಡಿ ಚಿನ್ನಾಭರಣ ದೋಚಿ ಆರೋಪಿಗಳು ಪರಾರಿಯಾಗಿರುವ ಘಟನೆ ನಡೆದಿದೆ.
ಶೋಭಾ (69) ಮೃತ ಮಹಿಳೆ. ವೃದ್ಧ ದಂಪತಿ ಇಬ್ಬರೇ ಮನೆಯಲ್ಲಿದ್ದ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿದ್ದಾರೆ. ಮೃತ ಮಹಿಳೆಯ ಪತಿ ರಂಗನಾಥ್ ವೀಲ್ ಚೇರ್ನಲ್ಲಿ ಇದ್ದರು ಎಂದು ತಿಳಿದುಬಂದಿದೆ.
ಮನೆಯಲ್ಲಿ ವೃದ್ಧ ದಂಪತಿ ಮಾತ್ರ ಇರುವುದನ್ನು ಗಮನಿಸಿದ್ದ ದರೋಡೆಕೋರರು ಚಿನ್ನಾಭರಣದ ಮೇಲೆ ಕಣ್ಣು ಹಾಕಿದ್ದರು ಎನ್ನಲಾಗಿದೆ. ಬುಧವಾರ (ಫೆ.18) ಸಂಜೆ ಮನೆಗೆ ನುಗ್ಗಿ ವೃದ್ಧೆಯ ಕತ್ತು ಹಿಸುಕಿ, ತಲೆಗೆ ಹೊಡೆದು ಕೊಲೆ ಮಾಡಿ ಬಳಿಕ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಚಿನ್ನಾಭರಣ ದೋಚಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆನೆಲಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ವಾನದಳವನ್ನು ಕರೆಸಲಾಗಿದೆ. ದರೋಡೆ ಕುರಿತ ಮಾಹಿತಿ ಸಂಗ್ರಹಿಸಲು ಪೊಲೀ



