HomeKarnataka Newsಕನವಳ್ಳಿಯಲ್ಲಿ ಭೀಕರ ಅಗ್ನಿ ಅವಘಡ: ದನದ ಕೊಟ್ಟಿಗೆಗೆ ಬೆಂಕಿ, 10ಕ್ಕೂ ಹೆಚ್ಚು ಎಮ್ಮೆಗಳು ಸಜೀವ ದಹನ!

ಕನವಳ್ಳಿಯಲ್ಲಿ ಭೀಕರ ಅಗ್ನಿ ಅವಘಡ: ದನದ ಕೊಟ್ಟಿಗೆಗೆ ಬೆಂಕಿ, 10ಕ್ಕೂ ಹೆಚ್ಚು ಎಮ್ಮೆಗಳು ಸಜೀವ ದಹನ!

For Dai;y Updates Join Our whatsapp Group

Spread the love

ಹಾವೇರಿ: ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ದನದ ಕೊಟ್ಟಿಗೆಯಲ್ಲಿ ಇದ್ದ 10ಕ್ಕೂ ಹೆಚ್ಚು ಎಮ್ಮೆಗಳು ಸಜೀವವಾಗಿ ದಹನಗೊಂಡ ದುರ್ಘಟನೆ ನಡೆದಿದೆ.

ಗ್ರಾಮದ ರೈತ ಪರಮೇಶ ಜಾಡರ್ ಅವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿ ದೊಡ್ಡ ಪ್ರಮಾಣದ ಹಾನಿ ಉಂಟಾಗಿದೆ. ಬೆಂಕಿ ತೀವ್ರತೆಯಿಂದ ಎಮ್ಮೆಗಳು ಹೊರಬರಲು ಸಾಧ್ಯವಾಗದೇ ಸಜೀವವಾಗಿ ಸುಟ್ಟು ಕರಕಲಾಗಿವೆ.

ಘಟನೆಯಲ್ಲಿ ಸುಮಾರು 10 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಎಮ್ಮೆಗಳು ಹಾಗೂ ದನದ ಕೊಟ್ಟಿಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ ಎಂದು ತಿಳಿದು ಬಂದಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಕೊನೆಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಇನ್ನಷ್ಟು ಹಾನಿ ತಪ್ಪಿಸಲಾಗಿದೆ.

ಇದೇ ಕನವಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಐದು ಬಾರಿ ಇಂತಹ ಬೆಂಕಿ ಅವಘಡಗಳು ಸಂಭವಿಸಿರುವುದು ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇದರಿಂದ ಕಿಡಿಗೇಡಿಗಳ ಸಂಚು ಇರಬಹುದೆಂಬ ಅನುಮಾನ ವ್ಯಕ್ತವಾಗಿದೆ.

ಘಟನೆಯ ಸಂಬಂಧ ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಿಡಿಗೇಡಿಗಳನ್ನು ಶೀಘ್ರ ಪತ್ತೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!