ತುಮಕೂರು: ಮನೆಯ ನೀರಿನ ತೊಟ್ಟಿಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ ಹೊಸಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಅಂಗಡಿ ಮಂಜಣ್ಣನವರ ಪುತ್ರ ಕುಶಾಲ್ 3 ಮೃತ ಮಗುವಾಗಿದ್ದು ಆಕಸ್ಮಿಕವಾಗಿ ಮನೆಯ ಮುಂದಿನ ನೀರಿನ ತೊಟ್ಟಿಗೆ ಬಿದ್ದು ಮೃತ ಪಟ್ಟಿದೆ.
Advertisement
ಮನೆ ಮುಂದೆ ಆಟವಾಡುತ್ತಿದ್ದ ಮಗು ಕಾಣದಿದ್ದಾಗ ಕುಟುಂಬಸ್ಥರ ಹುಡುಕಾಟ ನಡೆಸಿದ್ದಾರೆ. ಬಳಿಕ ನೀರಿನ ತೊಟ್ಟಿಯಲ್ಲಿ ಬಿದ್ದಿರುವುದು ಪತ್ತೆಯಾಗಿದೆ.
ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನವಾಗಿಲ್ಲ, ಯಾಕಂದ್ರೆ ಅಷ್ಟರಲ್ಲೇ ಮಗು ಸಾವನ್ನಪ್ಪಿದೆ. ಇನ್ನೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.