ದೊಡ್ಡಬಳ್ಳಾಪುರ: ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಈಜು ದುರಂತಗಳಿಂದ ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಸ್ನೇಹಿತರೊಂದಿಗೆ ಕೃಷಿ ಹೊಂಡದಲ್ಲಿ ಈಜಾಡಲು ಹೋಗಿದ್ದ ಬಾಲಕ ಮೃತ ಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ನಡೆದಿದೆ.
Advertisement
ಗ್ರಾಮದ ರಾಜು ಎಂಬುವವರ ಮಗನಾದ ನಾಗೇಶ್(14) ಮೃತ ದುರ್ಧೈವಿಯಾಗಿದ್ದು,ಇಂದು ಶಾಲೆ ಮುಗಿದ ನಂತರ ಬಿಸಿಲಿನ ತಾಪಕ್ಕೆ ಮೂರು ಜನ ಸ್ನೇಹಿತರೊಂದಿಗೆ ಕೃಷಿ ಹೊಂಡದಲ್ಲಿ ಈಜಾಡಲು ಹೋಗಿದ್ದಾನೆ.
ಮೂರು ಮಂದಿಯಲ್ಲಿ ನಾಗೇಶ್ ನೇರವಾಗಿ ನೀರಿಗೆ ಇಳಿದಿದ್ದಾನೆ. ಈಜು ಬಾರದ ಹಿನ್ನೆಲೆ ನೀರಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.