ಬೆಂಗಳೂರು: ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ ತನ್ನ 17 ವರ್ಷದ ಮಗಳನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
40 ವರ್ಷದ ಸುವರ್ಣ ಎಂಬ ಮಹಿಳೆ ತನ್ನ ಮಗಳು ಕಾರುಣ್ಯಳನ್ನು ಹತ್ಯೆ ಮಾಡಿ ನಂತರ ಆತ್ಮಹತ್ಯೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಈ ದಾರುಣ ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟನೆ ಕುರಿತು ಮಾಹಿತಿ ತಿಳಿದ ವೈಟ್‌ಫೀಲ್ಡ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಈ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.



