ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆಯ ಗ್ರಾಮೀಣ ಠಾಣೆ ಎಎಸ್‌ಐ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಎಎಸ್‌ಐ ಹಾಲಪ್ಪ (56) ಹೃದಯಾಘಾತದಿಂದ ಮೃತಪಟ್ಟ ದುರ್ಧೈವಿಯಾಗಿದ್ದು,
ರಾಜಸ್ಥಾನದ ಜೋಧ್‌ಪುರಕ್ಕೆ ಕರ್ತವ್ಯ ನಿಮಿತ್ತ ತೆರಳಿದ್ದರು. ಹೊಸಪೇಟೆಯ ಗ್ರಾಮೀಣ ಠಾಣೆಯ ಎಎಸ್‌ಐ ಹಾಲಪ್ಪ ಅವರು ಸೇರಿದಂತೆ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ ತೆರಳಿದ್ದರು. ಕರ್ತವ್ಯದಲ್ಲಿದ್ದ ವೇಳೆಯೇ ಹಾಲಪ್ಪ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.
ಮೃತ ಎಎಸ್‌ಐ ಹಾಲಪ್ಪ ಅವರು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಗ್ರಾಮದವರಾಗಿದ್ದರು. ನಾಳೆ ಸ್ವಗ್ರಾಮ ಹಿರೇಹಡಗಲಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.



