ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲಸೂರು ಬಳಿಯ ವಾರ್ ಮೆಮೋರಿಯಲ್ ಸರ್ಕಲ್‌ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ ಮಾಡಿರುವ ಘಟನೆ ಜರುಗಿದೆ.
Advertisement
40 ವರ್ಷದ ಶಿವಕುಮಾರ್ @ ಬಿಕ್ಲು ಶಿವ ಹತ್ಯೆಯಾದ ರೌಡಿಶೀಟರ್. ಸ್ಥಳಕ್ಕೆ ಭಾರತೀನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆ ಹೊರಗಡೆ ನಿಂತಿದ್ದಾಗ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಕಾರಿನಲ್ಲಿ ಬಂದ 4-5 ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಹಳೇ ದ್ವೇಷದಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.
ಸ್ಥಳಕ್ಕೆ ಭಾರತೀನಗರ ಪೊಲೀಸರು, ಡಿಸಿಪಿ ಡಿ.ದೇವರಾಜ, ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.