ಭೀಕರ ರಸ್ತೆ ಅಪಘಾತ: ಬೈಕ್-ಲಾರಿ ಡಿಕ್ಕಿಯಾಗಿ ಇಬ್ಬರು ಯುವಕರು ಸಾವು!

0
Spread the love

ಆಂಧ್ರಪ್ರದೇಶ:- ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಬಾಪಟ್ಲಾ ಎಂಬಲ್ಲಿ ಜರುಗಿದೆ.

Advertisement

ಬೈಕ್​​​ ಸವಾರ ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಯುವಕರು ರಕ್ತಸ್ರಾವದಿಂದ ನರಳಾಡುತ್ತ ರಸ್ತೆಯಲ್ಲಿ ಬಿದ್ದಿದ್ದರು. ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಯುವಕರಿಬ್ಬರನ್ನು ಆಸ್ಪತ್ರೆ ದಾಖಲಿಸಿದ್ದಾರೆ. ಆದರೆ ಯುವಕರ ಪ್ರಾಣ ಸ್ಥಳದಲ್ಲಿ ಹೋಗಿದೆ. ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಸೋಶಿಯಲ್​​ ಮೀಡಿಯಾದಲ್ಲಿ ವಿಡಿಯೋ ವೈರಲ್​ ಆಗಿದೆ.

ಅಪಘಾತಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, ಪೋಲೀಸರು ಲಾರಿ ಚಾಲಕನಿಗಾಗಿ ಶೋಧ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here