ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಇಬ್ಬರು ಮಕ್ಕಳು ಸೇರಿ 6 ಮಂದಿ ಸಾವು

0
Spread the love

ನೆಲಮಂಗಲ: ಭೀಕರ ಸರಣಿ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ.

Advertisement

ಏಕಾಏಕಿ ಲಾರಿ ಕಾರಿನ ಮೇಲೆ ಬಿದ್ದಿದ್ದರಿಂದ ಕಾರು ನುಚ್ಚಾಗಿದೆ. ಇನ್ಜು ಕಾರಿನೊಳಗಿದ್ದ ಎರಡು ಮಕ್ಕಳು ಸೇರಿ ಆರು ಜನರು ಸಹ ಮೃತಪಟ್ಟಿದ್ದಾರೆ. ಹೆದ್ದಾರಿ 4ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 1 ಕಿಲೋ ಮೀಟರ್​​ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.

ಇನ್ನು ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ SP ಸಿ.ಕೆ ಬಾಬಾ ಸೇರಿದಂತೆ ಇತರೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಸಾರ್ವಜನಿಕರ ನೆರವಿನಿಂದ ಹರಸಾಹಸಪಟ್ಟು ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ.


Spread the love

LEAVE A REPLY

Please enter your comment!
Please enter your name here