ಭೀಕರ ಸರಣಿ ರಸ್ತೆ ಅಪಘಾತ: ಇಬ್ಬರು ದುರ್ಮರಣ, ಹಲವರಿಗೆ ಗಂಭೀರ ಗಾಯ

0
Spread the love

ಕೋಲಾರ:- ಭೀಕರ ರಸ್ತೆ ಸರಣಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಜರುಗಿದೆ.

Advertisement

ಘಟನೆಯಲ್ಲಿ ಸುಮಾರು 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಬಂಗಾರಪೇಟೆ, ಕೆಜಿಎಫ್ ಹಾಗೂ ಕೋಲಾರ ಆಸ್ಪತ್ರೆಗೆ ರವಾಸಲಾಗಿದೆ. ಬೆಂಗಳೂರು-ಚೆನೈ ಎಕ್ಸ್‌ಪ್ರೆಸ್‌ ವೇನಲ್ಲಿ ಟೆಂಪೋ ವಾಹನಕ್ಕೆ ಈಚರ್ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಟೆಂಪೋ, ಆ್ಯಂಬುಲೆನ್ಸ್​​ಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಆ್ಯಂಬುಲೆನ್ಸ್ ಚಾಲಕ ವಿಕ್ರಮ್ ಪಾಲ್ ಮತ್ತು ಟೆಂಪೋ ಚಾಲಕ ಶಿವರಾಜ್ ಮೃತರು.

ಟೆಂಪೋದಲ್ಲಿ ಬೆಂಗಳೂರಿನ ಎಸ್​​ಕೆಸಿ ಕ್ಯಾಟರಿಂಟ್​​ನ 15 ಜನ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಸುಮಾರು ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಸದ್ಯ ಸ್ಥಳಕ್ಕೆ ಎಸ್​ಪಿ ಶಿವಾಂಶು ರಜಪೂತ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here