ಬೆಳಗಾವಿ: ಬೆಳಗಾವಿಯಲ್ಲಿ ಘೋರ ದುರಂತ ನಡೆದಿದ್ದು, ಆಟವಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಪ್ರವೀಣ ಸಂತೋಷ್ ಮಂಟೂರ (9) ಮೃತ ಬಾಲಕನಾಗಿದ್ದು, ಸತತ 6 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಅಗ್ನಿಶಾಮಕದಳ ಸಿಬ್ಬಂದಿಗಳು ಬಾವಿಯಿಂದ ಬಾಲಕನ ಮೃತದೇಹ ಹೊರತೆಗೆದಿದ್ದಾರೆ.
ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಗನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.



