ಕಲಬುರಗಿ: ಕಲಬುರಗಿಯಲ್ಲಿ ಘೋರ ದುರಂತ ಸಂಭವಿಸಿದ್ದು, ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅನಸೂಯಾ ಆತ್ಮಹತ್ಯೆಗೆ ಮಾಡಿಕೊಂಡ ದುರ್ಧೈವಿಯಾಗಿದ್ದು,
ಕಲಬುರಗಿ ನಗರದ ಆಜಾದಪುರ್ ಬಡಾವಣೆಯ ನಿವಾಸಿಯಾಗಿದ್ದಾಳೆ. ಅತ್ತೆ ಮಗ ಅವಿನಾಶ್ ಜೊತೆ ಪ್ರೀತಿಸಿ ಹಿರಿಯರ ಸಮ್ಮುಖದಲ್ಲಿ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು.
ಆದರೆ ಮದುವೆಯ ನಂತರ ಅನಸೂಯಾಗೆ ತಮ್ಮ ಮೂವರು ಸಹೋದರಿಯರು ಬೆಂಗಳೂರು ಹಾಗೂ ಮುಂಬೈ ಮುಂತಾದ ಮಹಾನಗರಗಳಲ್ಲಿ ವಾಸಿಸುತ್ತಿದ್ದು, ನಾನು ಮಾತ್ರ ಹಳ್ಳಿಯಲ್ಲಿ ಜೀವನ ನಡೆಸಬೇಕಾಗಿರುವುದರಿಂದ ಮಾನಸಿಕ ಅಸಮಾಧಾನ ಕಾಡುತ್ತಿತ್ತು ಎನ್ನಲಾಗಿದೆ. ಈ ವೇಳೆ ಪೋಷಕರು ಬುದ್ದಿಮಾತು ಹೇಳಿ ಕಳುಹಿಸಿದ್ದಾರೆ. ಆದರೆ, ಅನಸೂಯಾಗೆ ಇದೇ ಮಾನಸಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮದುವೆಗೆ ಮುನ್ನ ಅನಸೂಯಾ ಬೆಂಗಳೂರಿನಲ್ಲಿ ಒಂದು ವರ್ಷ ಉದ್ಯೋಗ ಮಾಡಿಕೊಂಡು ವಾಸವಾಗಿದ್ದರು. ಮದುವೆಯ ನಂತರ ಮತ್ತೆ ಮಹಾನಗರದಲ್ಲಿ ಜೀವನ ನಡೆಸಬೇಕೆಂಬ ಆಸೆ ಹೆಚ್ಚಾಗಿದ್ದು, ಅದೇ ಮಾನಸಿಕ ಒತ್ತಡಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಪ್ರೀತಿಸಿದ್ದ ಪತಿ ಅವಿನಾಶ್ ರನ್ನು ಬಿಟ್ಟು ದೂರ ಹೋಗಲು ಮನಸ್ಸಿಲ್ಲದೆ, ಕಲಬುರಗಿಯಲ್ಲೇ ಗಂಡನ ಮನೆಯಲ್ಲಿಯೇ ವಾಸ ಮುಂದುವರಿಸಿದ್ದರು.
ಈ ಮಾನಸಿಕ ಒತ್ತಡದ ನಡುವೆ, ನಿನ್ನೆ ಮಧ್ಯಾಹ್ನ ಗಂಡನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅನಸೂಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



