ಜಗದ್ಗುರುಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ

0
Spread the love

ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ತಾಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ಭಾನುವಾರ ಭೇಟಿ ನೀಡಿದ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಲಿಂ.ವೀರಗಂಗಾಧರ ಜಗದ್ಗುರುಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಈ ವೇಳೆ ಶ್ರೀಮಠದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು ಸಚಿವರನ್ನು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಸಚಿವರು, ಧರ್ಮಕ್ಷೇತ್ರದಲ್ಲಿ ತ್ರಿಕೋಟಿ ಶಿವಲಿಂಗ ಪ್ರತಿಷ್ಠಾಪನಾ ಕಾರ್ಯಕ್ಕೆ ಸಹಾಯ-ಸಹಕಾರ ಸಲ್ಲಿಸುವುದಾಗಿ ಹೇಳಿದರು. ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ಆನಂದ ಗಡ್ಡದೇವರಮಠ, ರಾಜೀವ ಕುಂಬಿ, ವಿರೂಪಾಕ್ಷ ನಂದೆಣ್ಣವರ ಮುಂತಾದವರಿದ್ದರು.

Advertisement

Spread the love

LEAVE A REPLY

Please enter your comment!
Please enter your name here