ಹೊಸಕೋಟೆ: ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ಅಲಸಹಳ್ಳಿ ಗೇಟ್ ಬಳಿಯ ಅರಣ್ಯ ಪ್ರದೇಶದಲ್ಲಿ ಜರುಗಿದೆ.
ಸೋಹೇಲ್ (24) ನೇಣಿಗೆ ಶರಣಾದ ಯುವಕ. ಮಗನ ದುರಂತವನ್ನು ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ಯುವಕ ನಗರದ ಹಲಸೂರು ಸುತ್ತಮುತ್ತ ಟೈಲ್ಸ್ ಕೆಲಸ ಮಾಡುತ್ತಿದ್ದ, ಮತ್ತು ಮೂಲವಾಗಿ ಇವರ ಕುಟುಂಬ ರಾಜಸ್ಥಾನದಿಂದ ಬದುಕು ಕಟ್ಟಿಕೊಳ್ಳಲು ಬಂದಿದ್ದರು. ಇದೀಗ ಮಗನ ಸಾವಿನಿಂದ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.
ಸ್ಥಳಕ್ಕೆ ಹೊಸಕೋಟೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ತನಿಖೆಯಿಂದ ತಿಳಿದು ಬರಬೇಕಾಗಿದೆ.



