ಚಿಕ್ಕಮಗಳೂರು:- ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಜಿಲ್ಲೆಯ ಸ್ಪಂದನಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ರೋಗಿಗಳನ್ನು ಬೇರೊಂದು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ನಗರದ ಸೇಂಟ್ ಜೋಸೆಫ್ ಶಾಲಾ ಮುಂಭಾಗವಿರುವ ಸ್ಪಂದನಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿರುವಂತಹ ಘಟನೆ ನಡೆದಿದೆ. ಕಟ್ಟಡದ ಕೆಳಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಶಂಕೆ ವ್ಯಕ್ತವಾಗಿದೆ.
ಸದ್ಯ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ರೋಗಿಗಳು, ಸಿಬ್ಬಂದಿಗಳು ಹೊರಬಂದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ 10ಕ್ಕೂ ಹೆಚ್ಚು ರೋಗಿಗಳನ್ನು ಸರ್ಕಾರಿ ಮಲ್ಲೇಗೌಡ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸ್ಪಂದನ ಆಸ್ಪತ್ರೆ ಆಡಳಿತ ಮಂಡಳಿ ಆಸ್ಪತ್ರೆಯನ್ನು ಸಂಪೂರ್ಣ ಬಂದ್ ಮಾಡಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.



