ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಬಟ್ಟೆ ಬದಲಿಸುತ್ತಿದ್ದ ಸಂದರ್ಭದಲ್ಲಿ ಕದ್ದುಮುಚ್ಚಿ ವಿಡಿಯೋ ಚಿತ್ರೀಕರಿಸುತ್ತಿದ್ದ ಸಿಬ್ಬಂದಿಯನ್ನು ಅರೆಸ್ಟ್ ಮಾಡಲಾಗಿದೆ.
ಬಂಧಿತ ಆರೋಪಿಯನ್ನು ಸುವೆಂದು ಮೊಹಂತ ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದಿಂದ ನಾಗರಭಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದನು. ಆಪರೇಷನ್ ಥಿಯೇಟರ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರೋಪಿ ವಿಡಿಯೋ ಚಿತ್ರೀಕರಿಸುತ್ತಿರುವುದನ್ನು ನರ್ಸ್ ಗಮನಿಸಿದ್ದರು. ನರ್ಸ್ ಈ ವಿಷಯವನ್ನು ಹಿರಿಯ ವೈದ್ಯ ಚೇತನ್ ಅವರಿಗೆ ತಿಳಿಸಿದ್ದಾರೆ.
ವೈದ್ಯರು ಪೊಲೀಸರಿಗೆ ದೂರು ಸಲ್ಲಿಸಿದ ಬಳಿಕ, ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಡಿಯೋ ಸೆರೆಮಾಡಿದ್ದ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಪೊಲೀಸರು ತನಿಖೆಯನ್ನೂ ಮುಂದುವರೆಸುತ್ತಿದ್ದು, ವಿಡಿಯೋಗಳನ್ನೂ ಬೇರೆವರಿಗೆ ಕಳುಹಿಸಿದ್ದಾನೋ ಎಂಬುದನ್ನು ಪರಿಶೀಲಿಸುತ್ತಿದ್ದಾರೆ.



