ವಿಜಯಪುರ:- ಜಿಲ್ಲೆಯ ಇಂಡಿ ಪಟ್ಟಣದ ಹೊಟೇಲ್‌ವೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ನಡೆದಿದೆ.
ಹೋಟೆಲ್‌ನಲ್ಲಿ ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಘಟನೆ ಹಿನ್ನೆಲೆ ಲಕ್ಷಾಂತರ ಮೌಲ್ಯದ ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ. ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



