ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ನಡೆದಿದೆ. ಮೃತ ಮಹಿಳೆಯನ್ನು 27 ವರ್ಷದ ಸಂದ್ಯಾ ಎಂದು ಗುರುತಿಸಲಾಗಿದೆ.
ಮದುವೆಯಾದ 7 ವರ್ಷಗಳಿಂದ ಗಂಡ ಅನಂತ್ ಕುಮಾರ್ ಹಾಗೂ ಅವರ ಮನೆಯವರು ಸಂದ್ಯಾಳಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಸ್ಥಳೀಯರ ಮತ್ತು ಕುಟುಂಬಸ್ಥರಾಗಿದೆ. ಈ ಹಿನ್ನೆಲೆಯಲ್ಲಿ, ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ನಿಜವಾಗಿ ಆತ್ಮಹತ್ಯೆಯೇ ಅಲ್ಲದೆ ಕೊಲೆ ಎಂದು ಮಹಿಳೆಯ ತವರು ಮನೆಯವರು ಆರೋಪಿಸಿದ್ದಾರೆ.
ಮಹಿಳೆಯ ಮೃತದೇಹವನ್ನು ಕುಟುಂಬಸ್ಥರು ಪೋಲೀಸ್ ಠಾಣೆ ಬಳಿ ಕಾರಿನಲ್ಲಿ ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದಾರೆ. ಗಂಡನ ಮನೆಯವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ವ್ಯಕ್ತಪಡಿಸಿದ್ದಾರೆ.ಘಟನೆ ಬಳಿಕ ಗಂಡ ಮತ್ತು ಇತರ ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ. ಈ ಕುರಿತು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸರು ತನಿಖೆ ಮುಂದುವರಿಸಿದ್ದಾರೆ.